ಎಸ್ತೇರಳು 5:1 - ಪರಿಶುದ್ದ ಬೈಬಲ್1 ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು. ಅಧ್ಯಾಯವನ್ನು ನೋಡಿ |