Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:3 - ಪರಿಶುದ್ದ ಬೈಬಲ್‌

3 “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:3
11 ತಿಳಿವುಗಳ ಹೋಲಿಕೆ  

ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.


ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್‌ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.


ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಬತ್ಷೆಬೆಳು ಅವನಿಗೆ, “ನಿನ್ನಲ್ಲಿ ಒಂದು ಸಣ್ಣ ಕೋರಿಕೆಯಿದೆ, ಅದನ್ನು ದಯವಿಟ್ಟು ನಿರಾಕರಿಸದಿರು” ಎಂದು ಕೇಳಿದಳು. ರಾಜನು, “ನನ್ನ ತಾಯಿಯೇ, ನಿನ್ನ ಕೋರಿಕೆಯೇನು? ನಾನು ನಿನ್ನ ಕೋರಿಕೆಯನ್ನು ನಿರಾಕರಿಸುವುದಿಲ್ಲ” ಎಂದು ಉತ್ತರಿಸಿದನು.


“ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.


ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.


ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು