ಎಸ್ತೇರಳು 5:9 - ಪರಿಶುದ್ದ ಬೈಬಲ್9 ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.