Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:10 - ಪರಿಶುದ್ದ ಬೈಬಲ್‌

10 “ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:10
7 ತಿಳಿವುಗಳ ಹೋಲಿಕೆ  

ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.


ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.


ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.


ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು