ಎಸ್ತೇರಳು 6:11 - ಪರಿಶುದ್ದ ಬೈಬಲ್11 ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು. ಅಧ್ಯಾಯವನ್ನು ನೋಡಿ |