Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:12 - ಪರಿಶುದ್ದ ಬೈಬಲ್‌

12 ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:12
14 ತಿಳಿವುಗಳ ಹೋಲಿಕೆ  

ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.


ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?


ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.


ಕನ್ಯೆಯರು ಎರಡನೆ ಸಲ ಸಭೆ ಸೇರಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.


ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.


ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.


ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ, ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು