Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:13 - ಪರಿಶುದ್ದ ಬೈಬಲ್‌

13 ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನೆಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಆಗ ಅವನ ಪಂಡಿತರೂ ಹೆಂಡತಿಯೂ ಅವನಿಗೆ - ಯಾವನ ಮುಂದೆ ನಿನ್ನ ಪತನವು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಸಲಹೆಗಾರರೂ ಹೆಂಡತಿಯಾದ ಜೆರೆಷಳೂ ಅವನಿಗೆ, “ಯಾವನ ಮುಂದೆ ನಿನ್ನ ಬೀಳುವಿಕೆ ಪ್ರಾರಂಭವಾಯಿತೋ, ಆ ಮೊರ್ದೆಕೈ ಯೆಹೂದ್ಯನಾಗಿದ್ದರೆ ನೀನು ಅವನನ್ನು ಜಯಿಸಲಾರೆ. ನಿಶ್ಚಯವಾಗಿ, ನೀನು ಅವನಿಂದ ನಾಶವಾಗುವಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:13
16 ತಿಳಿವುಗಳ ಹೋಲಿಕೆ  

ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.


ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.


ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


“ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.


ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ.


ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.


ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


“ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.


ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು