ಎಸ್ತೇರಳು 6:14 - ಪರಿಶುದ್ದ ಬೈಬಲ್14 ಅವರು ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಅವನನ್ನು ರಾಣಿ ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಕರೆದುಕೊಂಡು ಹೋಗಲು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಇನ್ನೂ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು, ಎಸ್ತೇರಳು ಏರ್ಪಡಿಸಿರುವ ಔತಣಕ್ಕೆ ಬೇಗನೆ ಹೊರಟುಬರಬೇಕೆಂದು ಹಾಮಾನನನ್ನು ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಇನ್ನೂ ಅವನೊಡನೆ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗಬರಬೇಕೆಂದು ಹಾಮಾನನನ್ನು ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗಲೇ ರಾಜಕಂಚುಕಿಯವರು ಬಂದು, ಎಸ್ತೇರಳು ಏರ್ಪಡಿಸಿದ ಔತಣಕ್ಕೆ ಬೇಗನೆ ಬರಬೇಕೆಂದು ಹಾಮಾನನನ್ನು ಕರೆದರು. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.