Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:3 - ಪರಿಶುದ್ದ ಬೈಬಲ್‌

3 ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅರಸನು - ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವೆಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು - ಏನೂ ದೊರಕಲಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:3
12 ತಿಳಿವುಗಳ ಹೋಲಿಕೆ  

ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.


ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.


ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.


ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


“ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.


ಆ ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೈಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು.


ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು