Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:4 - ಪರಿಶುದ್ದ ಬೈಬಲ್‌

4 ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:4
12 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”


ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.


ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.


ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು.


ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.


ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.


ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು. “ಸರಿ, ಒಳಕ್ಕೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು