ಎಸ್ತೇರಳು 6:7 - ಪರಿಶುದ್ದ ಬೈಬಲ್7 ಅರಸನಿಗೆ, “ನೀನು ಗೌರವಿಸಬೇಕಾದ ಮನುಷ್ಯನಿಗೆ ಈ ರೀತಿಯಾಗಿ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಾಮಾನನು ತನ್ನನ್ನಲ್ಲದೆ ಬೇರೆ ಯಾರನ್ನು ಸನ್ಮಾನಿಸಲು ಅರಸನು ಬಯಸಿಯಾನು ಎಂದು ತನ್ನಲ್ಲೆ ಅಂದುಕೊಂಡು ಅವನಿಗೆ ಪ್ರತ್ಯುತ್ತರವಾಗಿ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ಈ ರೀತಿ ಮಾಡಬೇಕು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅರಸನಿಗೆ - ಒಬ್ಬನನ್ನು ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಹಾಮಾನನು ಅರಸನಿಗೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಮಾಡಬೇಕಾದದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.