Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:10 - ಪರಿಶುದ್ದ ಬೈಬಲ್‌

10 ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:10
22 ತಿಳಿವುಗಳ ಹೋಲಿಕೆ  

ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.


ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”


ಸಂಸೋನನು ಫಿಲಿಷ್ಟಿಯರಿಗೆ, “ನೀವು ನನಗೆ ಈ ದುಷ್ಕೃತ್ಯವನ್ನು ಮಾಡಿರುವುದರಿಂದ ನಾನೂ ನಿಮಗೆ ಕೇಡನ್ನು ಮಾಡುತ್ತೇನೆ” ಎಂದು ಹೇಳಿ,


ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.


ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು.


ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು.


ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.


ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.


ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು.


ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.


“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.


ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.


ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲಿಗೆ ಹಾಕಿದರು.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.


ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.


ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.


ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು