Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:3 - ಪರಿಶುದ್ದ ಬೈಬಲ್‌

3 ಆಗ ಎಸ್ತೇರ್ ರಾಣಿಯು, “ರಾಜನೇ, ನೀನು ನನ್ನನ್ನು ಮೆಚ್ಚಿ ಪ್ರೀತಿಸುವದಾದರೆ ದಯಮಾಡಿ ನಾನು ಬದುಕುವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಎಸ್ತೇರ್‍ರಾಣಿಯು - ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವದಾದರೆ ನನ್ನ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಜನಾಂಗವನ್ನೂ ಉಳಿಯಗೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:3
9 ತಿಳಿವುಗಳ ಹೋಲಿಕೆ  

ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.


ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.


ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!


ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.


ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.


ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು