Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:7 - ಪರಿಶುದ್ದ ಬೈಬಲ್‌

7 ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:7
14 ತಿಳಿವುಗಳ ಹೋಲಿಕೆ  

ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.


ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡುಮಾಡಲು ಬಯಸಿದ್ದಾನೆಂದು ತಿಳಿದುಕೋ.


ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು