Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:8 - ಪರಿಶುದ್ದ ಬೈಬಲ್‌

8 ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:8
9 ತಿಳಿವುಗಳ ಹೋಲಿಕೆ  

ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗುಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.


ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.


“ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ.


ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.


ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು