ಎಸ್ತೇರಳು 8:10 - ಪರಿಶುದ್ದ ಬೈಬಲ್10 ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |