Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:11 - ಪರಿಶುದ್ದ ಬೈಬಲ್‌

11 ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಪತ್ರಗಳಿಂದ ಅರಸನು - ಅಹಷ್ವೇರೋಷ್‍ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:11
9 ತಿಳಿವುಗಳ ಹೋಲಿಕೆ  

ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.


ಆದ್ದರಿಂದ ಅವರಿಗೆ ಅಡವಿಯಿಂದ ಮತ್ತು ಬಯಲಿನಿಂದ ಸೌದೆಯನ್ನು ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.


ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.


ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ!


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು