ಎಸ್ತೇರಳು 8:15 - ಪರಿಶುದ್ದ ಬೈಬಲ್15 ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿ |