ಎಸ್ತೇರಳು 8:17 - ಪರಿಶುದ್ದ ಬೈಬಲ್17 ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು. ಅಧ್ಯಾಯವನ್ನು ನೋಡಿ |