Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:2 - ಪರಿಶುದ್ದ ಬೈಬಲ್‌

2 ಹಾಮಾನನಿಂದ ತಿರಿಗಿ ಪಡೆದುಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:2
11 ತಿಳಿವುಗಳ ಹೋಲಿಕೆ  

ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.


ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.


ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದುಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.


ಅಹಷ್ವೇರೋಷ್ ಅರಸನು ಮಾಡಿದ ಎಲ್ಲಾ ಮಹತ್ಕಾರ್ಯಗಳೂ ಕೃತ್ಯಗಳೂ ಮೇದ್ಯ, ಪರ್ಶಿಯ ಅರಸರ ರಾಜಕಾಲವೃತ್ತಾಂತ ಪುಸ್ತಕಗಳಲ್ಲಿ ಬರೆಯಲ್ಪಟ್ಟಿರುತ್ತವೆ; ಮೊರ್ದೆಕೈ ಮಾಡಿದ ವಿಷಯಗಳ ಬಗ್ಗೆಯೂ ಬರೆಯಲ್ಪಟ್ಟಿದೆ. ಮೊರ್ದೆಕೈಯನ್ನು ಅರಸನು ಬಹು ದೊಡ್ಡ ಪ್ರಭಾವಶಾಲಿ ವ್ಯಕ್ತಿಯನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು