3 ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.