Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:5 - ಪರಿಶುದ್ದ ಬೈಬಲ್‌

5 ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನನ್ನನ್ನು ಮೆಚ್ಚಿ ನಾನು ಹೇಳುವ ಮಾತು ಉಚಿತವಾದದ್ದೆಂದೆಣಿಸಿ ಅದಕ್ಕೆ ಸಮ್ಮತಿಸುವದಾದರೆ ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವದರ ವಿಷಯವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರಿಸಿದ ಪತ್ರಗಳನ್ನು ರದ್ದುಮಾಡುವದಕ್ಕಾಗಿ ರಾಯಸವನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:5
9 ತಿಳಿವುಗಳ ಹೋಲಿಕೆ  

ಆಗ ಎಸ್ತೇರ್ ರಾಣಿಯು, “ರಾಜನೇ, ನೀನು ನನ್ನನ್ನು ಮೆಚ್ಚಿ ಪ್ರೀತಿಸುವದಾದರೆ ದಯಮಾಡಿ ನಾನು ಬದುಕುವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ.


ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.


ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.


ಅನಂತರ ರಾಜನಿಗೆ ಇಷ್ಟವಾದ ಕನ್ನಿಕೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು.


‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.


ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು