Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:6 - ಪರಿಶುದ್ದ ಬೈಬಲ್‌

6 ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:6
9 ತಿಳಿವುಗಳ ಹೋಲಿಕೆ  

ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.


ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು