ಎಸ್ತೇರಳು 8:7 - ಪರಿಶುದ್ದ ಬೈಬಲ್7 ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕೈಯೆತ್ತಿದದರಿಂದ ಅವನನ್ನು ಗಲ್ಲಿಗೆ ಹಾಕಿಸಿ ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ. ಅಧ್ಯಾಯವನ್ನು ನೋಡಿ |
ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.