ಎಸ್ತೇರಳು 9:1 - ಪರಿಶುದ್ದ ಬೈಬಲ್1 ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಪಾಲ್ಗುನಮಾಸದ ಹದಿಮೂರನೆಯ ದಿನವು ಬಂತು. ಆ ದಿವಸದಲ್ಲಿ ಯೆಹೂದ್ಯರನ್ನು ಸ್ವಾಧೀನಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ಹಗೆಗಳನ್ನು ಸ್ವಾಧೀನ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು. ಅಧ್ಯಾಯವನ್ನು ನೋಡಿ |