ಎಸ್ತೇರಳು 9:12 - ಪರಿಶುದ್ದ ಬೈಬಲ್12 ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್‌ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |