13 ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.
13 ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
13 ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.
13 ಅದಕ್ಕೆ ಎಸ್ತೇರಳು - ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವದಕ್ಕೂ ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವದಕ್ಕೂ ಯೆಹೂದ್ಯರಿಗೆ ಅಪ್ಪಣೆಯಾಗಬೇಕು ಎಂದು ಬೇಡಿಕೊಳ್ಳಲು ಅರಸನು ಹಾಗೆ ಮಾಡುವದಕ್ಕೆ ಅಪ್ಪಣೆಕೊಟ್ಟನು.
13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”
ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.
ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”
ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)
ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.