ಎಸ್ತೇರಳು 9:14 - ಪರಿಶುದ್ದ ಬೈಬಲ್14 ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲಿಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್‍ಕೋಟೆಯಲ್ಲಿ ಪ್ರಕಟವಾಯಿತು. ಮತ್ತು ಹಾಮಾನನ ಹತ್ತು ಮಂದಿ ಮಕ್ಕಳನ್ನು ಗಲ್ಲಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು. ಅಧ್ಯಾಯವನ್ನು ನೋಡಿ |
ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.