ಎಸ್ತೇರಳು 9:15 - ಪರಿಶುದ್ದ ಬೈಬಲ್15 ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶೂಷನಿನ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನದಲ್ಲೂ ಕೂಡಿಕೊಂಡು ಅಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಕೊಳ್ಳೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”