16 ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.
16 ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
16 ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.
16 ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”
ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.