Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:18 - ಪರಿಶುದ್ದ ಬೈಬಲ್‌

18 ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶೂಷನಿನ ಯೆಹೂದ್ಯರು ಹದಿಮೂರನೇ ಹಾಗೂ ಹದಿನಾಲ್ಕನೇ ದಿನ ಒಟ್ಟಾಗಿ ಸೇರಿಬಂದುದರಿಂದ, ಅವರು ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳಲ್ಲಿ [ವೈರಿಗಳನ್ನು ವಧಿಸುವದಕ್ಕೆ] ಕೂಡಿಕೊಂಡಿದ್ದದರಿಂದ ಹದಿನೈದನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿನವನ್ನು ಉತ್ಸವಭೋಜನದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:18
7 ತಿಳಿವುಗಳ ಹೋಲಿಕೆ  

ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.


ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.


ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.


ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.


ಶೂಷನ್ ನಗರದಲ್ಲಿ ಆ ದಿವಸ ಎಷ್ಟು ಮಂದಿ ಸತ್ತರು ಎಂದು ಅರಸನು ಕೇಳಿ ತಿಳಿದುಕೊಂಡನು.


ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”


ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು