Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:19 - ಪರಿಶುದ್ದ ಬೈಬಲ್‌

19 ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:19
13 ತಿಳಿವುಗಳ ಹೋಲಿಕೆ  

ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು