ಎಸ್ತೇರಳು 9:2 - ಪರಿಶುದ್ದ ಬೈಬಲ್2 ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದದರಿಂದ ಅರಸನಾದ ಅಹಷ್ವೇರೋಷನ ಸಮಸ್ತಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡುಬಯಸಿದವರಿಗೆ ವಿರೋಧವಾಗಿ ಕೈಯೆತ್ತುವದಕ್ಕೆ ಕೂಡಿಕೊಂಡಾಗ ಯಾರೂ ಅವರೆದುರಿನಲ್ಲಿ ನಿಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”