Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:22 - ಪರಿಶುದ್ದ ಬೈಬಲ್‌

22 ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:22
24 ತಿಳಿವುಗಳ ಹೋಲಿಕೆ  

ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.


ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.


ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!


ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.


ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ.


ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು