Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:23 - ಪರಿಶುದ್ದ ಬೈಬಲ್‌

23 ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಸ್ವೀಕರಿಸಿ ಆ ವರುಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:23
2 ತಿಳಿವುಗಳ ಹೋಲಿಕೆ  

ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು “ಪೂರೀಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು