Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:28 - ಪರಿಶುದ್ದ ಬೈಬಲ್‌

28 ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರ್ಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರಸಂಸ್ಥಾನ ನಗರಗಳವರು ಈ ದಿನಗಳನ್ನು ನೆನಪುಮಾಡಿಕೊಂಡು ಆಚರಿಸಬೇಕೆಂದೂ ಈ ಪೂರೀಮ್ ಹಬ್ಬವು ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು, ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:28
9 ತಿಳಿವುಗಳ ಹೋಲಿಕೆ  

ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.”


ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.


ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು.


ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು