Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:29 - ಪರಿಶುದ್ದ ಬೈಬಲ್‌

29 ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್‍ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:29
6 ತಿಳಿವುಗಳ ಹೋಲಿಕೆ  

ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.


ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.


ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರ್ಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು