ಎಸ್ತೇರಳು 9:5 - ಪರಿಶುದ್ದ ಬೈಬಲ್5 ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿ |
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”