Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:11 - ಪರಿಶುದ್ದ ಬೈಬಲ್‌

11 ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಸುಮ್ಮನೆ ಎದುರುನಿಂತ ದಿನದಲ್ಲಿ, ಅಂದರೆ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ಮ್ಲೇಚ್ಫರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇವಿುನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನೂ ಅವರಂತೆ ಇದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:11
13 ತಿಳಿವುಗಳ ಹೋಲಿಕೆ  

ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.


ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.


ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.


ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.


“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು