ಓಬದ್ಯ 1:13 - ಪರಿಶುದ್ದ ಬೈಬಲ್13 ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಸೊತ್ತಿಗೆ ನೀನು ಕೈಹಾಕಬಾರದಾಗಿತ್ತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು. ಅಧ್ಯಾಯವನ್ನು ನೋಡಿ |