Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:15 - ಪರಿಶುದ್ದ ಬೈಬಲ್‌

15 ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:15
28 ತಿಳಿವುಗಳ ಹೋಲಿಕೆ  

ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”


“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನು ಧನ್ಯನು.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


“ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.


ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು