ಓಬದ್ಯ 1:20 - ಪರಿಶುದ್ದ ಬೈಬಲ್20 ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲ್ಯರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು; ಸೆಪಾರದಿನಲ್ಲಿ ಸೆರೆಯಾಗಿರುವ ಯೆರೂಸಲೇವಿುನವರು ದಕ್ಷಿಣಪ್ರಾಂತದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.