3 ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”
3 ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.
3 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.
ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”
ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.
“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.
ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ.
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.