ಓಬದ್ಯ 1:4 - ಪರಿಶುದ್ದ ಬೈಬಲ್4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”