ಓಬದ್ಯ 1:5 - ಪರಿಶುದ್ದ ಬೈಬಲ್5 ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ ಬೇಕಾದಷ್ಟು ಮಾತ್ರ ದೋಚಿಕೊಂಡು ಹೋಗುವರಲ್ಲವೆ. (ಆಹಾ, ನೀನು ಎಷ್ಟೋ ಭಂಗಪಟ್ಟಿದ್ದೀ!) ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನು ಉಳಿಸುವದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.