ಓಬದ್ಯ 1:7 - ಪರಿಶುದ್ದ ಬೈಬಲ್7 ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ಅವನಿಗೆ ತಿಳಿಯುವುದೇ ಇಲ್ಲ’” ಎಂದು ಅನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ. ಅಧ್ಯಾಯವನ್ನು ನೋಡಿ |
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.