ಕೀರ್ತನೆಗಳು 10:11 - ಪರಿಶುದ್ದ ಬೈಬಲ್11 ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |