Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:14 - ಪರಿಶುದ್ದ ಬೈಬಲ್‌

14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:14
35 ತಿಳಿವುಗಳ ಹೋಲಿಕೆ  

ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.


ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದರಿಂದ ಸುಮ್ಮನಿರಬೇಡ; ನನ್ನ ಕೈಬಿಡಬೇಡ.


ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ, ನನಗೆ ಸಹಾಯಮಾಡಲು ಯಾರೂ ಇಲ್ಲ.


ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡುಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಕೃತ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


“ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.


ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.


“ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು.


ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.


ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.


ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.


ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು.


ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು