Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:3 - ಪರಿಶುದ್ದ ಬೈಬಲ್‌

3 ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:3
40 ತಿಳಿವುಗಳ ಹೋಲಿಕೆ  

ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?


ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.


ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.


ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


“ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಭರವಸವಿಡಲಿಲ್ಲ. ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ಈ ಲೋಕವನ್ನಾಗಲಿ ಈ ಲೋಕದಲ್ಲಿರುವ ವಸ್ತುಗಳನ್ನಾಗಲಿ ನೀವು ಪ್ರೀತಿಸಬೇಡಿ. ಈ ಲೋಕವನ್ನು ಪ್ರೀತಿಸುವವನಿಗೆ ತಂದೆಯ (ದೇವರ) ಮೇಲೆ ಪ್ರೀತಿಯಿರುವುದಿಲ್ಲ.


ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ


ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.


ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಆ ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು