ಕೀರ್ತನೆಗಳು 100:3 - ಪರಿಶುದ್ದ ಬೈಬಲ್3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.